ಅಭಿಪ್ರಾಯ / ಸಲಹೆಗಳು

ಇಂಧನ ಇಲಾಖೆ ಬಗ್ಗೆ

ಇಂಧನ ಇಲಾಖೆ ಪರಿಚಯ

ಕರ್ನಾಟಕ ಸರ್ಕಾರವು ಯಾವಾಗಲೂ ವಿದ್ಯುತ್ ಕ್ಷೇತ್ರದ ಪ್ರಗತಿಗೆ ಅತಿ ಹೆಚ್ಚು ಮಹತ್ವ ನೀಡುತ್ತ ಬಂದಿದೆ. ಉತ್ಪಾದನೆ, ಪ್ರಸರಣ ಮತ್ತು ವಿತರಣೆ ವಿಭಾಗಗಳು ವಿದ್ಯುತ್ ಸಾಗಿಸುವಲ್ಲಿ ಮುಖ್ಯವಾಗಿದ್ದು, ಅವುಗಳಿಗೆ ಅದ್ಯತೆಯ ಅಗತ್ಯವಿದೆ. ಕರ್ನಾಟಕ ಸರ್ಕಾರವು ಇಂಧನ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಈ ಕೆಳಗೆ ಸೂಚಿಸಿರುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. 


೧.   ರಾಜ್ಯದ ವಿದ್ಯುಚ್ಛಕ್ತಿ ಉತ್ಪಾದನಾ ಸಾಮರ್ಥ್ಯವನ್ನು  ಕ.ವಿ.ನಿ.ನಿ., ಭಾರತ ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳಿಂದ ಮತ್ತು ಖಾಸಗಿ ಅಭಿವೃದ್ದಿದಾರರ ಮುಖಾಂತರ ವಿದ್ಯುತ್ ಸಾಮರ್ಥ್ಯವನ್ನು ಹೆಚ್ಚಿಸುವುದು.
೨.   ಕ.ವಿ.ಪ್ರ.ನಿ.ನಿ ಹಾಗೂ ವಿದ್ಯುತ್ ವಿತರಣಾ ಕಂಪನಿಗಳಿಂದ ಪ್ರಸರಣ ಮತ್ತು ವಿತರಣಾ ನಷ್ಟವನ್ನು ತಾಂತ್ರಿಕ ಪ್ರಗತಿಯ ಮೂಲಕ ಕಡಿಮೆ ಮಾಡುವುದು.
೩.   ವಿದ್ಯುತ್ ವ್ಯವಸ್ಥೆಯಲ್ಲಿ ಸುಧಾರಣೆ ಕೆಲಸಗಳ ಮೂಲಕ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವುದು.
೪.   ಪ್ರಸರಣ ಮತ್ತು ವಿತರಣಾ ಜಾಲವನ್ನು ರಾಜ್ಯದ ಉದ್ದಗಲಕ್ಕೂ ವಿಸ್ತರಿಸುವುದು.
೫.   ಹಂತ ಹಂತವಾಗಿ ರಾಜ್ಯದ ಎಲ್ಲಾ ಸಣ್ಣ ಹಳ್ಳಿಗಳಿಗೆ ಮತ್ತು ಮನೆಗಳಿಗೆ ವಿದ್ಯುದೀಕರಣಗೊಳಿಸುವುದು.
೬.   ಎಲ್ಲಾ ವಿದ್ಯುತ್ ವಿತರಣಾ ಕಂಪನಿಗಳ ಕಾರ್ಯಕ್ಷಮತೆಯನ್ನು ವೃದ್ಧಿಸುವುದು.
೭.   ನವೀಕರಿಸಬಹುದಾದ ಇಂಧನ ಮೂಲಗಳ ಅಭಿವೃದ್ಧಿಗೆ ಪ್ರೋತ್ಸಾಹಿಸುವುದು.

೮.   ಇಂಧನ ಉಳಿತಾಯದ ಕ್ರಮಗಳನ್ನು ಅನುಷ್ಠಾನಗೊಳಿಸುವುದು.

ಇತ್ತೀಚಿನ ನವೀಕರಣ​ : 15-07-2019 03:13 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಇಂಧನ ಇಲಾಖೆ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ